ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಕೊಲೆಯೊಂದು ನಡೆದಿದೆ. ದುಷ್ಕರ್ಮಿಗಳು ಯುವಕನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ.
ಹತ್ಯೆಯಾದ ಯುವಕನನ್ನು ಹನುಮಂತ ಅಣ್ಣಿಗೇರಿ (25) ಎಂದು ಗುರುತಿಸಲಾಗಿದೆ. ಅವರು ಲಕ್ಷ್ಮಿ ಸಿಂಗನಕೇರಿ ನಿವಾಸಿ ಎಂದು ತಿಳಿದುಬಂದಿದೆ.

ಬೆಳಗಿನ ಜಾವ ನಡೆದ ಈ ಕೊಲೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ದುಷ್ಕರ್ಮಿಗಳು ಯುವಕನನ್ನು ಕತ್ತು ಸೀಳಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಹಾಗೂ ಆರೋಪಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಈ ಘಟನೆ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.