ಹುಬ್ಬಳ್ಳಿ: ಮಾದಕ ವಸ್ತುಗಳ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿದ ಹುಬ್ಬಳ್ಳಿ ಪೊಲೀಸರು, ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 6.135 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ₹1,53 ಲಕ್ಷ ಎಂದು ಎಂದು ತಿಳಿದುಬಂದಿದೆ.

ಬಂಧಿತರಿಂದ ನಾಲ್ಕು ಮೊಬೈಲ್ ಫೋನ್ಗಳು, ನಗದು ಹಾಗೂ ಒಂದು ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಒಟ್ಟು ₹2,60,500 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳನ್ನು ಹುಬ್ಬಳ್ಳಿಯ ಮಾಂತೇಶ ತಂದೆ ಮಂಜುನಾಥ ಹೊಸಮನಿ 27 ವರ್ಷ, ಫಯಾಜ್ @ ಮಂದೆ ತಂದೆ ಮಾಬೂಸಾಬ ಗುಂಟಿವಾಲೆ, 23 ವರ್ಷ,ಸೊಯೆಬ್ ತಂದೆ ದಾದಾಪೀರ್ ಧಾರವಾಡ, 25 ವರ್ಷ ಹಾಗೂ ಬೆಂಗಳೂರು ಮೂಲದ ಅಲೀನಾ @ ಅಬ್ರಾರ್ ತಂದೆ ಮೊಹಮ್ಮದ್ ನೂರಲ್ಲಾ 21 ವರ್ಷ ಎಂದು ತಿಳಿದುಬಂದಿದೆ.
ಈ ಸಂಬಂಧ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 85/2026, ಎನ್ಡಿಪಿಎಸ್ ಕಾಯ್ದೆ 1985ರ ಕಲಂ 20(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಎಸಿಪಿ ಶಿವಪ್ರಕಾಶ ನಾಯಕ್, ಸಿಸಿಬಿ ಅವರ ನೇತೃತ್ವದಲ್ಲಿ ಸಿಸಿಬಿ ಪಿಎಸ್ಐಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.