ಹುಬ್ಬಳ್ಳಿ: ನಗರದ ಗ್ರಾಮೀಣ ಘಟಕ–1ರ ಡಿಪೋ ಆವರಣದಲ್ಲಿ ಚಾಲಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮಂಜುನಾಥ (38) ಎಂದು ಗುರುತಿಸಲಾಗಿದೆ. ಮುಂಡರಗಿ ತಾಲೂಕಿನ ಮುಂಡವಾಡ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಹುಬ್ಬಳ್ಳಿಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಡಿಪೋ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಂಜುನಾಥ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಈವರೆಗೆ ತಿಳಿದುಬಂದಿಲ್ಲ.
ಘಟನೆ ಕುರಿತು ಮಾಹಿತಿ ತಿಳಿದು ಗೋಕುಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.